ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆಯನ್ನು ಎಲ್ಲಾ ಶಾಲೆಗಳಲ್ಲಿ ಬೋಧನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಮಾಯಣ, ಮಹಾಭಾರತದ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ ಮಕ್ಕಳಿಗೆ ಪಾಠ ಮಾಡಲಾಗುತ್ತದೆ ಎಂದು ಹೇಳಲಾಗ್ತಿದೆ. ನೈತಿಕ ಪಾಠದ ಅಡಿಯಲ್ಲಿ ಭಗವದ್ಗೀತೆ ಪಠ್ಯ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿ ಕೂಡಾ ರಚನೆ ಆಗಲಿದೆ.

ಗುಜರಾತ್ ನಲ್ಲಿ 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪಠಣ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ ಪಠ್ಯ ತಯಾರಿ ನಡೆಸಲಾಗುತ್ತಿದೆ ಎನ್ನಲಾಗ್ತಿದೆ.

ಈ ತಿಂಗಳ ಕೊನೆಯಲ್ಲಿ ಅಂತಿಮ ಪಠ್ಯದ ರೂಪುರೇಷೆ ಸಿದ್ಧವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!