Thursday, August 11, 2022

Latest Posts

ಪ್ರವೀಣ್ ಹಂತಕರ ಬಂಧನಕ್ಕೆ‌ ತಂಡ ರಚನೆ: ಸಚಿವ ಸುನೀಲ್ ಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಂಗಳೂರು:
ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ರಾಜ್ಯ ಗೃಹಸಚಿವರ ಜತೆ ಚರ್ಚೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ಯುವ ಮುಖಂಡ, ಅಮಾಯಕ ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಇದನ್ನು ನೋಡಿ ಸರಕಾರ ಸುಮ್ಮನಿರಲು ಸಾಧ್ಯವಿಲ್ಲ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಿ, ಗೃಹ ಸಚಿವರಿಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ ತಂಡ ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ಮಟ್ಟಹಾಕುವ ಕೆಲಸವನ್ನು ಸರಕಾರ ಪ್ರಾಮಾಣಿಕವಾಗಿ ಮಾಡಲಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.
ಉದ್ವೇಗ ಬೇಡ:
ಪ್ರವೀಣ್ ಹತ್ಯೆ ವಿಚಾರದಲ್ಲಿ ಯಾರೂ ಉದ್ವೇಗಕ್ಕೊಳಗಾಗುವುದು ಬೇಡ. ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಶಾಂತಿ ಪ್ರಿಯರು. ಕೊಲೆ ವಿಚಾರದಲ್ಲಿ ಆರೋಪಿಗಳ ಮಟ್ಟಹಾಕುವ ಪ್ರಯತ್ನ ಶೀಘ್ರದಲ್ಲೇ ಆಗಲಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss