Thursday, July 7, 2022

Latest Posts

ಎಡವಿದ ಟೀಂ ಇಂಡಿಯಾ: ಸೌತ್ ಆಫ್ರಿಕಾಕ್ಕೆ149 ರನ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 149 ರನ್ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ರುತುರಾಜ್ ಗಾಯಕ್ವಾಡ್ ಕೇವಲ 1 ರನ್ ಸಿಡಿಸಿ ಔಟಾದರು. ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಜೊತೆಯಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು.
ನಾಯಕ ರಿಷಬ್ ಪಂತ್ ಕೇವಲ 5 ರನ್ ಸಿಡಿಸಿ ಔಟಾದರು. ಹಾರ್ದಿಕ್ ಪಾಂಡ್ಯ 9 ರನ್ ಸಿಡಿಸಿ ಔಟಾದರು. ಶ್ರೇಯಸ್ ಅಯ್ಯರ್ 40 ರನ್ ಸಿಡಿಸಿ ಔಟಾದರು.
ಅಕ್ಸರ್ ಪಟೇಲ್ 10 ರನ್ ಸಿಡಿಸಿ ಔಟಾದರು. ಅಂತಿಮ ಹಂತದಲ್ಲಿ ದಿನೇಶ್ ಕಾರ್ತಿಕ್ ಹಾಗೂ ಹರ್ಷಲ್ ಪಟೇಲ್ ಹೋರಾಟದಿಂದ ಭಾರತ ಅತ್ಯಲ್ಪ ಮೊತ್ತದಿಂದ ಪಾರಾಯಿತು. ದಿನೇಶ್ ಕಾರ್ತಿಕ್ 21 ಎಸೆತದಲ್ಲಿ ಅಜೇಯ 30 ರನ್ ಸಿಡಿಸಿದರೆ, ಹರ್ಷಲ್ ಪಟೇಲ್ ಅಜೇಯ 12 ರನ್ ಸಿಡಿಸಿದರು. ಈ ಮೂಲಕ ಭಾರತ 6 ವಿಕೆಟ್ ನಷ್ಟಕ್ಕೆ 148 ರನ್ ಸಿಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss