ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡದ ನಾಯಕ ಪಟ್ಟವನ್ನು ಕನ್ನಡಿಗ ಕೆಎಲ್ ರಾಹುಲ್‌ಗೆ ನೀಡಲಾಗಿದೆ.
ಸೌತ್ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ. ಇನ್ನು ರಿಷಬ್ ಪಂತ್ ಏಕದಿನ ಸರಣಿಗೆ ಕಮ್‌ಬ್ಯಾಕ್ ಮಾಡಿದ್ದಾರೆ.
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ತಿಲಕ್ ವರ್ಮಾ, ಕೆಎಲ್ ರಾಹುಲ್, ರಿಷಬ್ ಪಂತ್, ವಾಶಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಶದೀಪ್ ಸಿಂಗ್, ಧ್ರುವ್ ಜುರೆಲ್
ಮೊಹಮ್ಮದ್ ಸಿರಾಜ್ ಔಟ್, ಶಮಿಗೆ ಸ್ಥಾನವಿಲ್ಲ
ಮೊಹಮ್ಮದ್ ಸಿರಾಜ್ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ. ಇತ್ತ ವೇಗಿ ಮೊಹಮ್ಮದ್ ಶಮಿ ಇತ್ತೀಚೆಗೆ ಟೀಂ ಇಂಡಿಯಾ ಆಯ್ಕೆ ಹಾಗೂ ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು. ಆದರೆ ಈ ಬಾರಿಯೂ ಮೊಹಮ್ಮದ್ ಶಮಿ ಸ್ಥಾ ಪಡೆದಿಲ್ಲ.
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ನವೆಂಬರ್ 30 ರಿಂದ ಆರಂಭಗೊಳ್ಳಲಿದೆ. ಮೊದಲ ಪಂದ್ಯ ರಾಂಚಿಯಲ್ಲಿ ನಡೆಯೆಲಿದೆ. ಎರಡನೇ ಪಂದ್ಯ ಡಿಸೆಂಬರ್ 3ರಂದು ರಾಯ್‌ಪುರದಲ್ಲಿ ನಡೆದರೆ, ಮೂರನೇ ಪಂದ್ಯ ಡಿಸೆಂಬರ್ 6ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭಗೊಳ್ಳಲಿದೆ.

