Sunday, October 1, 2023

Latest Posts

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಸಾರಥಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ 15 ಸದಸ್ಯರ ಈ ಬಳಗವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಮೂರನೇ ಪಂದ್ಯವನ್ನುರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ಈ ಸರಣಿಯ ಮೂಲಕ ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾಗೆ ಮರಳಿದ್ದಾರೆ. ಮೊದಲ ಎರಡು ಪಂದ್ಯದಲ್ಲಿ ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ವಿರಾಟ್ ಕೊಹ್ಲಿ ಗೆ ವಿಶ್ರಾಂತಿ ನೀಡಲಾಗಿದೆ.

ಮೊದಲ 2 ಪಂದ್ಯಗಳಿಗೆ ಭಾರತ ತಂಡ
ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಅಕ್ಷರ್ ಪಟೇಲ್ (ಫಿಟ್​ನೆಸ್ ಸಾಧಿಸಿದರೆ).

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:
ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!