Wednesday, December 6, 2023

Latest Posts

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯದಲ್ಲಿ ಭಾರತ ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದ್ದು, ಇದರ ಬೆನ್ನಲ್ಲೇ ಮತ್ತೆ ಆಸ್ಟ್ರೇಲಿಯಾ ವಿರುದ್ಧದ ಹೋರಾಟಕ್ಕೆ ಸಜ್ಜಾಗಿದೆ.

ನವೆಂಬರ್ 23ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭಗೊಳ್ಳುತ್ತಿದೆ. ಭಾರತ ಆತಿಥ್ಯವಹಿಸಿರುವ ಈ ಟೂರ್ನಿ ವಿಶಾಖಪಟ್ಟಣದಿಂದ ಆರಂಭಗೊಳ್ಳುತ್ತಿದೆ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಐ ಸರಣಿಗೆ ಭಾರತ ತಂಡ ಪ್ರಕಟಿಸಿದ್ದು, ಸೂರ್ಯಕುಮಾರ್ ಯಾದವ್ ಅವರನ್ನ ಭಾರತದ ನಾಯಕರನ್ನಾಗಿ ನೇಮಿಸಲಾಗಿದೆ.

ಭಾರತ ತಂಡ : ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ರಾಯ್ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ 20 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಉಪನಾಯಕರಾಗಿ ತಂಡವನ್ನ ಸೇರಿಕೊಳ್ಳಲಿದ್ದಾರೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯರಿಗೆ ವಿಶ್ರಾಂತಿ ನೀಡಲಾಗಿದೆ.

ನವೆಂಬರ್ 23 ರಿಂದ ಡಿಸೆಂಬರ್ 03ರ ವರೆಗೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಸರಣಿ ನಡೆಯಲಿದೆ. ವಿಶಾಖಪಟ್ಟಣದಲ್ಲಿ ಮೊದಲ ಟಿ20 ಪಂದ್ಯ ಆಯೋಜಿಸಲಾಗಿದೆ. ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭಗೊಳ್ಳಲಿದೆ. ಎರಡನೇ ಟಿ20 ಪಂದ್ಯ ತಿರುವಂತಪುರದಲ್ಲಿ ನವೆಂಬರ್ 26ಕ್ಕೆ ಆಯೋಜನೆಗೊಂಡಿದೆ. ನವೆಂಬರ್ 28ರಂದು ಗುವ್ಹಾಟಿಯಲ್ಲಿ 3ನೇ ಟಿ20 ಪಂದ್ಯ ನಡೆಯಲಿದೆ. ಇನ್ನು ಡಿಸೆಂಬರ್ 1 ರಂದು ನಾಗ್ಪುರದಲ್ಲಿ 4ನೇ ಹಾಗೂ ಡಿಸೆಂಬರ್ 3 ರಂದು ಹೈದರಾಬಾದ್‌ನಲ್ಲಿ 5ನೇ ಹಾಗೂ ಅಂತಿಮ ಟಿ20 ಪಂದ್ಯ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!