ಟಿ20 ವಿಶ್ವಕಪ್ ಗೆ ಟೀಮ್ ಇಂಡಿಯಾ ಘೋಷಣೆ: 15 ಆಟಗಾರರ ತಂಡ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ಮುನ್ನಡೆಸಲಿದ್ದಾರೆ.

ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಸಾಥ್ ನೀಡಲಿದ್ದಾರೆ.

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಜೂನ್ 01ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ.

ಟಿ20 ವಿಶ್ವಕಪ್ ಗೆಲ್ಲಲು ಸಾಕಷ್ಟು ಅಳೆದು ತೂಗಿ 15 ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಅನುಭವಿ ಆಟಗಾರರಿಗೆ ಅಜಿತ್ ಅಗರ್ಕರ್‌ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಮಣೆ ಹಾಕಿದೆ.

ರೋಹಿತ್ ಶರ್ಮಾ ಜತೆಗೆ ಯಶಸ್ವಿ ಜೈಸ್ವಾಲ್ ಇನಿಂಗ್ಸ್‌ ಆರಂಭಿಸಲಿದ್ದು, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅಗ್ರಕ್ರಮಾಂಕದ ಬ್ಯಾಟರ್‌ಗಳಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್ ಕೀಪರ್ ರೂಪದಲ್ಲಿ ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕನ್ನಡಿಗ ಕೆ ಎಲ್ ರಾಹುಲ್ ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಪರ ಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚುತ್ತಿರುವ ಶಿವಂ ದುಬೆ ಕೊನೆಗೂ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕೆಕೆಆರ್ ಪರ ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆದಿರುವ ರಿಂಕು ಸಿಂಗ್, ಭಾರತದ 15ರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ರಿಂಕು ಮೀಸಲು ಆಟಗಾರರಾಗಿ ಸ್ಥಾನ ಪಡೆದಿದ್ದಾರೆ.

ಆಲ್ರೌಂಡರ್ ರೂಪದಲ್ಲಿ ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ಇನ್ನು ತಜ್ಞ ಸ್ಪಿನ್ನರ್‌ಗಳ ರೂಪದಲ್ಲಿ ಲೆಗ್‌ಸ್ಪಿನ್ನರ್‌ಗಳಾದ ಯುಜುವೇಂದ್ರ ಚಹಲ್ ಹಾಗೂ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲಿಂಗ್ ದಾಳಿಯನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸಲಿದ್ದು, ಇವರಿಗೆ ಮೊಹಮ್ಮದ್ ಸಿರಾಜ್ ಹಾಗೂ ಆವೇಶ್ ಖಾನ್ ಸಾಥ್ ನೀಡಲಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ:

ರೋಹಿತ್‌ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ(ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌, ಶಿವಂ ದುಬೆ, ಕುಲ್ದೀಪ್‌ ಯಾದವ್‌, ಯುಜುವೇಂದ್ರ ಚಹಲ್, ಜಸ್‌ಪ್ರೀತ್‌ ಬುಮ್ರಾ, ಅರ್ಶ್‌ದೀಪ್‌ ಸಿಂಗ್‌, ಮೊಹಮದ್‌ ಸಿರಾಜ್‌.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!