ಏಷ್ಯನ್ ಗೇಮ್ಸ್‌ ಗೆ ಟೀಮ್ ಇಂಡಿಯಾ ಪ್ರಕಟ: ಸಾರಥಿಯಾಗಿ ಗಾಯಕ್ವಾಡ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೆಪ್ಟೆಂಬರ್ 23ರಿಂದ ಅಕ್ಟೋಬರ್ 08ರ ವರೆಗೆ ಚೀನಾದಲ್ಲಿ ಮುಂಬರುವ ನಡೆಯಲಿರುವ 19ನೇ ಏಷ್ಯನ್ ಗೇಮ್ಸ್‌ ಕ್ರಿಕೆಟ್‌ಗೆ ಭಾರತ ಪುರುಷ ಹಾಗೂ ಮಹಿಳಾ ಕ್ರಿಕೆಟ್ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ.

ಪುರುಷರ ತಂಡವನ್ನು ಋತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ. 2023ನೇ ಸಾಲಿನ ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ರಿಂಕು ಸಿಂಗ್ ಹಾಗೂ ಪ್ರಭ್‌ಸಿಮ್ರನ್‌ ಸಿಂಗ್ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಏಷ್ಯನ್‌ ಗೇಮ್ಸ್‌ಗೆ ಆಯ್ಕೆಯಾದವರು, ಭಾರತದಲ್ಲೇ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವುದಿಲ್ಲ ಎನ್ನುವುದನ್ನು ಬಿಸಿಸಿಐ ಈಗಾಗಲೇ ಸ್ಪಷ್ಟಪಡಿಸಿತ್ತು. ಹೀಗಾಗಿಯೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಇನ್ನಿತರ ಹಿರಿಯ ಆಟಗಾರರಿಗೆ ಏಷ್ಯನ್ ಗೇಮ್ಸ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.

ಏಷ್ಯನ್ ಗೇಮ್ಸ್‌ ಕ್ರಿಕೆಟ್ ಟೂರ್ನಿಗೆ ಭಾರತ ತಂಡದಲ್ಲಿ ರಾಹುಲ್ ತ್ರಿಪಾಠಿ, ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್ ವರ್ಮಾ ಅವರಿಗೂ ಮಣೆ ಹಾಕಲಾಗಿದೆ. ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್ ವರ್ಮಾ ಅವರನ್ನು ಈಗಾಗಲೇ ವೆಸ್ಟ್ ಇಂಡೀಸ್ ಎದುರಿನ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.ಇನ್ನುಳಿದಂತೆ ಆಲ್ರೌಂಡರ್‌ಗಳಾದ ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಹಾಗೂ ಶಹಬಾಜ್ ಅಹಮ್ಮದ್ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ ಏಷ್ಯನ್‌ ಗೇಮ್ಸ್‌ಗೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, ಹರ್ಮನ್‌ಪ್ರೀತ್ ಕೌರ್ ನಾಯಕಿಯಾಗಿ ನೇಮಕವಾಗಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂದನಾ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಶಫಾಲಿ ವರ್ಮಾ, ಕನ್ನಡತಿ ರಾಜೇಶ್ವರಿ ಗಾಯಕ್ವಾಡ್‌ ಸೇರಿದಂತೆ ಬಲಾಢ್ಯ ಆಟಗಾರ್ತಿಯರನ್ನು ಒಳಗೊಂಡ ತಂಡ ಪ್ರಕಟಿಸಲಾಗಿದೆ.

ಪುರುಷರ ತಂಡ:
ಋತುರಾಜ್ ಗಾಯಕ್ವಾಡ್(ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಪ್ರಭ್‌ಸಿಮ್ರನ್ ಸಿಂಗ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶೆಹಬಾಜ್ ಅಹಮದ್, ರವಿ ಬಿಷ್ಣೋಯ್, ಆವೇಶ್ ಖಾನ್, ಆರ್ಶದೀಪ್ ಸಿಂಗ್, ಮುಕೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ.

ಮಹಿಳಾ ತಂಡ
ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂದನಾ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗ್ಸ್‌, ರಿಚಾ ಘೋಷ್, ದೀಪ್ತಿ ಶರ್ಮಾ, ಅಮನ್‌, ದೇವಿಕಾ ವೈದ್ಯ, ಅಂಜಲಿ, ಟಿಟಾಸ್ ಸದು, ರಾಜೇಶ್ವರಿ ಗಾಯಕ್ವಾಡ್, ಮಿನ್ನು ರಾಣಿ, ಕನಿಕಾ ಅಹುಜಾ, ಉಮಾ, ಅನುಷಾ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here