Friday, June 2, 2023

Latest Posts

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾ ಪ್ರಕಟ, ಈ ಸ್ಟಾರ್ ಪ್ಲೇಯರ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೂನ್ 7 ರಿಂದ 11 ರವರೆಗೆ ಲಂಡನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಡೆಯಲಿದ್ದು, ಬಿಸಿಸಿಐ ಟೀಂ ಇಂಡಿಯಾ ಆಟಗಾರರನ್ನು ಆಯ್ಕೆ ಮಾಡಿದೆ.

15 ಜನರ ಬಲಿಷ್ಠ ತಂಡವನ್ನು ಬಿಸಿಸಿಐ ಪ್ರಕಟ ಮಾಡಿದ್ದು, ನಿರೀಕ್ಷೆಯಂತೆ ಜಸ್‌ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಅಜಿಂಕ್ಯಾ ರಹಾನೆ ತಂಡಕ್ಕೆ ಕಂ ಬ್ಯಾಕ್ ಮಾಡಿದ್ದು, ಸೂರ್ಯಕುಮಾರ್ ಯಾದವ್‌ಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್‌ಗೆ ಇನ್ನೂ ವಿಶ್ರಾಂತಿ ಅಗತ್ಯ ಇದ್ದು, ಅವರೂ ತಂಡದಿಂದ ಹೊರಗುಳುದಿದ್ದಾರೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ.ಎಸ್. ಭರತ್ ಮತ್ತು ಕೆ.ಎಲ್. ರಾಹುಲ್ ವಿಕೆಟ್ ಕೀಪರ್ ಆಗಿರಲಿದ್ದಾರೆ.

ಟೀಂ ಹೀಗಿದೆ..
ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಲ್ ರಾಹುಲ್, ಕೆ.ಎಸ್. ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!