ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ರವಿ ಬಿಷ್ಣೋಯ್, ದೀಪಕ್ ಹುಡಾಗೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೆ.6 ರಿಂದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭವಾಗಲಿದ್ದು, ಟೀಂ ಇಂಡಿಯಾ ತನ್ನ ತಂಡ ಪ್ರಕಟ ಮಾಡಿದೆ.
ಗಾಯದ ಕಾರಣ ಸೌತ್ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದೀಗ ತಂಡಕ್ಕೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಯುವ ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಸ್ಫೋಟಕ ಬ್ಯಾಟರ್ ದೀಪಕ್ ಹುಡಾ ಮೊದಲ ಬಾರಿಗೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ವೇಗಿಗಳಾದ ಜಸ್‌ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ರವೀಂದ್ರ ಜಡೇಜಾ ಅವರಿಗೆ ಮೊಣಕಾಲಿನ ಗಾಯವಿದ್ದು, ಅವರನ್ನೂ ಆಯ್ಕೆ ಮಾಡಲಾಗಿಲ್ಲ. ರವಿಚಂದ್ರನ್ ಅಶ್ವಿನ್ ಅವರನ್ನು ಕೂಡ ಆಯ್ಕೆ ಮಾಡಲಾಗಿಲ್ಲ.

ಭಾರತ ಟಿ20 ತಂಡ

ರೋಹಿತ್ ಶರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ  ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಭಾರತ ಏಕದಿನ ತಂಡ

ರೋಹಿತ್ ಶರ್ಮಾ, ಕೆಎಲ್ ರಾಹುಲ್, ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!