ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಪ್ ಟೌನ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ ತಂಡ ಕೇವಲ 55 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.
ಭಾರತದ ಬೌಲರ್ಗಳ ದಾಳಿಗೆ ನಲುಗಿದ ಆಫ್ರಿಕಾ ಆಟಗಾರರು ವೇಗವಾಗಿ ಪೆವಿಲಿಯನ್ ಸೇರಿಕೊಂಡರು.
ತಂಡದ ಪರ ಕೈಲ್ ವೆರ್ರೆನ್ನೆ ಅತ್ಯಧಿಕ 15 ರನ್ ಬಾರಿಸಿದರೆ, 12 ರನ್ ಕಲೆಹಾಕಿದ ಡೇವಿಡ್ ಬೆಡಿಂಗ್ಹ್ಯಾಮ್ ತಂಡದ ಪರ ಅಧಿಕ ರನ್ ಕಲೆಹಾಕಿದ ಎರಡನೇ ಬ್ಯಾಟರ್ ಎನಿಸಿಕೊಂಡರು.
ಇನ್ನು ಟೀಂ ಇಂಡಿಯಾ ಪರ ಬೌಲಿಂಗ್ನಲ್ಲಿ ಸುನಾಮಿ ಎಬ್ಬಿಸಿದ ಮೊಹಮ್ಮದ್ ಸಿರಾಜ್ 6 ವಿಕೆಟ್ ಪಡೆದು ಐತಿಹಾಸಿಕ ಸಾಧನೆ ಮಾಡಿದರೆ, ಜಸ್ಪ್ರೀತ್ ಬುಮ್ರಾ ಹಾಗೂ ಮುಖೇಶ್ ಕುಮಾರ್ ತಲಾ 2 ವಿಕೆಟ್ ಪಡೆದರು.