ಸಹಸ್ರ ಪಂದ್ಯದಲ್ಲಿ ಗೆಲುವಿನ ನಗೆ ಬಿರಿದ ಟೀಮ್ ಇಂಡಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವೆಸ್ಟ್ ಇಂಡೀಸ್ ವಿರುದ್ದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೀಮ್ ಇಂಡಿಯಾ ಐತಿಹಾಸಿಕ ಸಾವಿರದ ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ.
ವೆಸ್ಟ್ ಇಂಡೀಸ್ ನೀಡಿದ 177 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 28 ಓವರ್​ಗಳಲ್ಲಿ ಭರ್ಜರಿ ಜಯ ದಾಖಲಿಸಿದೆ.
ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ 60 ರನ್​ ಬಾರಿಸಿ ಮಿಂಚಿದರು. ಉಳಿದಂತೆ ಇಶಾನ್ ಕಿಶನ್​ 36 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್​ ಸಹಿತ 28, ವಿರಾಟ್​ ಕೊಹ್ಲಿ 8 ಮತ್ತು 11 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.
ಸೂರ್ಯಕುಮಾರ್ ಯಾದವ್​ 36 ಎಸೆತಗಳಲ್ಲಿ 5 ಬೌಂಡರಿ ಸಹಿತ ಅಜೇಯ 34, ಇಂದೇ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ದೀಪಕ್​ ಹೂಡ ಅಜೇಯ 26 ರನ್​ ಸಿಡಿಸಿ ತಂಡವನ್ನು ಗೆಲುವಿನ ಗಡಿ ದಾಟಿಸಿದರು.
ಭಾರತ ಮತ್ತು ವಿಂಡೀಸ್​ ನಡುವಿನ 2ನೇ ಏಕದಿನ ಪಂದ್ಯ ಫೆಬ್ರವರಿ 9ರಂದು ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!