ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಬೆಂಗಳೂರಿನಲ್ಲಿ ಟೀಂ ಇಂಡಿಯಾ ದೀಪಾವಳಿ ಸಂಭ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ ಕ್ರಿಕೆಟ್ ತಂಡವು ಭಾನುವಾರ ಕ್ರಿಕೆಟ್ ವಿಶ್ವಕಪ್ 2023ರ ಭಾಗವಾಗಿ ನೆದರ್ಲ್ಯಾಂಡ್ಸ್ ವಿರುದ್ಧ ತಮ್ಮ ಅಂತಿಮ ಲೀಗ್ ಪಂದ್ಯವನ್ನು ಆಡಲಿದೆ. ಇದಕ್ಕೂ ಮುನ್ನ ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಆಟಗಾರರು ದೀಪಾವಳಿ ಹಬ್ಬವನ್ನು ಆಚರಣೆಯಲ್ಲಿ ಸಂಭ್ರಮಿಸಿದರು.

ಸ್ಕ್ವಾಡ್ ಸದಸ್ಯರು ಮತ್ತು ಸಹಾಯಕ ಸಿಬ್ಬಂದಿ, ಹೊಟೇಲ್‌ ತಂಡ, ಸ್ನೇಹಿತರೊಟ್ಟಿಗೆ ಸೇರಿ ಭಾತರ ತಂಡದ ಅಟಗಾರರು ದೀಪಾವಳಿಯನ್ನು ಆಚರಿಸಿದರು. ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ತಮ್ಮ ಹಬ್ಬದ ಸಂಭ್ರಮವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ದೀಪಾವಳಿ ಪಾರ್ಟಿಯಲ್ಲಿ ಕ್ರಿಕೆಟಿಗರು ಕುರ್ತಾ-ಪೈಜಾಮಾ ಧರಿಸಿ ಪಾಲ್ಗೊಂಡಿದ್ದರು. ಈ ಕುರಿತ ಫೋಟೋಗಳು ಅಭಿಮಾನಿಗಳನ್ನು ಆಕರ್ಷಿಸುತ್ತಿವೆ. ಅಭಿಮಾನಿಗಳು ಕೂಡ ನೆಚ್ಚಿನ ತಾರೆಯರಿಗೆ ಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಗೆಲುವಿನೊಂದಿಗೆ ಪ್ರಯಾಣ ಆರಂಭಿಸಿದೆ. ಆ ಬಳಿಕ ಬಾಂಗ್ಲಾದೇಶ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡಗಳನ್ನು ಸೋಲಿಸಿದ ಟೀಂ ಇಂಡಿಯಾದ ಪ್ರಾಬಲ್ಯ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here