ಟೀಮ್ ಇಂಡಿಯಾ ಮುಡಿಗೆ ಏಷ್ಯಾಕಪ್ ಟ್ರೋಫಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ .

ಶ್ರೀಲಂಕಾ ವಿರುದ್ದಧ ಫೈನಲ್ ಪಂದ್ಯದಲ್ಲಿ ಭಾರತ ಕೇವಲ 6.1 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಗುರಿ ತಲುಪಿದೆ. ಈ ಮೂಲಕ 8ನೇ ಏಷ್ಯಾಕಪ್ ಟ್ರೋಫಿ ಗೆದ್ದ ಸಾಧನೆ ಮಾಡಿದೆ. ಶ್ರೀಲಂಕಾ ತಂಡವನ್ನು 50 ರನ್‌ಗೆ ಆಲೌಟ್ ಮಾಡಿದ್ದ ಟೀಂ ಇಂಡಿಯಾ 51 ರನ್ ಟಾರ್ಗೆಟ್ ಪಡೆದಿತ್ತು. ಈ ಗುರಿಯನ್ನು 6.1 ಓವರ್‌ಗಳಲ್ಲಿ ಚೇಸ್ ಮಾಡಿ ಟ್ರೋಫಿ ಗೆದ್ದುಕೊಂಡಿದೆ.

ಗಿಲ್ ಅಜೇಯ 27 ರನ್ ಸಿಡಿಸಿದರೆ, ಕಿಶನ್ ಅಜೇಯ 23 ರನ್ ಸಿಡಿಸಿದರು. ಈ ಮೂಲಕ ಭಾರತ 10 ವಿಕೆಟ್ ಭರ್ಜರಿ ಗೆಲುವು ದಾಖಲಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!