Tuesday, October 21, 2025

ದಿಢೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಕ್ರಿಕೆಟ್‌ ಆಟಗಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ಇದು ವಿಷಾದದ ಸುದ್ದಿ. ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ನಡುವೆ, ಜಮ್ಮು ಮತ್ತು ಕಾಶ್ಮೀರದಿಂದ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಮೊದಲ ಕ್ರಿಕೆಟ್ ಆಟಗಾರ ಪರ್ವೇಜ್ ರಸೂಲ್ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

36ನೇ ವಯಸ್ಸಿನಲ್ಲಿ ನಿವೃತ್ತಿಯಾಗುತ್ತಿರುವ ರಸೂಲ್ ಟೀಂ ಇಂಡಿಯಾದಲ್ಲಿ ಹೆಚ್ಚು ಅವಕಾಶ ಪಡೆಯದಿದ್ದರೂ, ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 95 ಪ್ರಥಮ ದರ್ಜೆ ಪಂದ್ಯಗಳಲ್ಲಿ 5648 ರನ್ ಮತ್ತು 352 ವಿಕೆಟ್‌ಗಳನ್ನು ಸಂಪಾದಿಸಿದ್ದು, 164 ಲಿಸ್ಟ್ ಎ ಮತ್ತು 71 ಟಿ20 ಪಂದ್ಯಗಳಲ್ಲಿ ತಾವು ಸ್ಫುರ್ತಿದಾಯಕ ಪ್ರದರ್ಶನ ನೀಡಿದ್ದಾರೆ.

ನಿವೃತ್ತಿ ಘೋಷಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ರಸೂಲ್ , “ಜಮ್ಮು-ಕಾಶ್ಮೀರ ಕ್ರಿಕೆಟ್ ಪ್ರಾರಂಭದಲ್ಲಿದ್ದಾಗ ನಮ್ಮ ಪ್ರಯತ್ನವನ್ನು ಗಂಭೀರವಾಗಿ ಪರಿಗಣಿಸಲ್ಪಟ್ಟಿಲ್ಲ. ಆದರೆ ನಾವು ದೊಡ್ಡ ತಂಡಗಳನ್ನು ಸೋಲಿಸಿದ್ದೇವೆ ಮತ್ತು ರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದೇವೆ. ನನ್ನ ಕೊಡುಗೆ ತಂಡದ ಯಶಸ್ಸಿಗೆ ಸ್ಫೂರ್ತಿ ನೀಡಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೂನ್ 15, 2014ರಂದು ಬಾಂಗ್ಲಾದೇಶದ ವಿರುದ್ಧ ಮಿರ್ಪುರದಲ್ಲಿ ಮೊದಲ ಏಕದಿನ ಪಂದ್ಯ ಆಡಿದ ರಸೂಲ್, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಜನವರಿ 26, 2017ರಂದು ಇಂಗ್ಲೆಂಡ್ ವಿರುದ್ಧ ಪದಾರ್ಪಣೆ ಮಾಡಿದ್ದರು.

error: Content is protected !!