Monday, August 8, 2022

Latest Posts

BREAKING NEWS | ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿಗೆ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್‌ನಲ್ಲಿದ್ದು, ಸರಣಿಯ ಮೂರು ಪಂದ್ಯಗಳನ್ನು ಈಗಾಗಲೇ ಆಡಲಾಗಿದ್ದು, ನಾಲ್ಕನೇ ಟೆಸ್ಟ್ ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿದೆ. ಭಾನುವಾರ ಟೆಸ್ಟ್ ಪಂದ್ಯದ ನಾಲ್ಕನೇ ದಿನ. ಈ ಮಧ್ಯೆ ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ.
ಬೌಲಿಂಗ್ ತರಬೇತುದಾರ ಭರತ್ ಅರುಣ್ ಮತ್ತು ಇತರ ಇಬ್ಬರು ಸಹಾಯಕ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾನುವಾರ ಟ್ವೀಟ್ ಮಾಡುವ ಮೂಲಕ ಈ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss