ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶಕ್ಕೆ ಕಠಿಣ ಟಾರ್ಗೆಟ್ ಅನ್ನು ನೀಡಿದೆ.
ಮೂರನೇ ದಿನದಾಟದಲ್ಲಿ 2ನೇ ಇನ್ನಿಂಗ್ಸ್ ಆರಂಭಿಸಿದ ಇಂಡಿಯಾ, . ಶುಭಮನ್ ಗಿಲ್ ಹಾಗೂ ಚೇತೇಶ್ವರ್ ಪೂಜಾರ ಭರ್ಜರಿ ಶತಕದ ಮೂಲಕ ಬೃಹತ್ ಮೊತ್ತ ಕಲೆಹಾಕಿತು.
ನಾಯಕ ಕೆಎಲ್ ರಾಹುಲ್ 23 ರನ್ ಸಿಡಿಸಿ ಔಟಾಗಿದ್ದರು. ಶುಭಮನ್ ಗಿಲ್ 152 ಎಸೆತದಲ್ಲಿ 110 ರನ್ ಸಿಡಿಸಿದರು. ಬಳಿಕ ವಿರಾಟ್ ಕೊಹ್ಲಿ ಜೊತೆ ಚೇತೇಶ್ವರ ಪೂಜಾರ ಇನ್ನಿಂಗ್ಸ್ ಮುಂದುವರಿಸಿದರು. ಪೂಜಾರ 130 ಎಸೆತದಲ್ಲಿ ಅಜೇಯ 102 ರನ್ ಸಿಡಿಸಿದರು. ಇತ್ತ ಕೊಹ್ಲಿ ಅಜೇಯ 19 ರನ್ ಸಿಡಿಸಿದರು. ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 258 ರನ್ ಸಿಡಿಸಿ ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿತು. ಈ ಮೂಲಕ ಬಾಂಗ್ಲಾದೇಶಕ್ಕೆ 513 ರನ್ ಟಾರ್ಗೆಟ್ ನೀಡಿತು.
ಇದನ್ನು ಬೆನ್ನತ್ತಿದ್ದ ಬಾಂಗ್ಲಾ, 3ನೇ ದಿನದಾಟದ ಅಂತ್ಯದಲ್ಲಿ ವಿಕೆಟ್ ನಷ್ಟವಿಲ್ಲದೆ 42 ರನ್ ಸಿಡಿಸಿದೆ. ಈ ಮೂಲಕ ಬಾಂಗ್ವಾದೇಶ 471 ರನ್ ಹಿನ್ನಡೆಯಲ್ಲಿದೆ.ನಜ್ಮುಲ್ ಅಜೇಯ 25 ರನ್ ಸಿಡಿಸಿದರೆ, ಜಾಕಿರ್ ಹಸನ್ ಅಜೇಯ 17 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ ದಿಟ್ಟ ಹೋರಾಟ ನೀಡಲು ಸಾಧ್ಯವಾಗಲಿಲ್ಲ. ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್ ಆಯಿತು.
ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 404 ರನ್ ಸಿಡಿಸಿತ್ತು. .