July 25, 2026
Saturday, July 25, 2026
spot_img

ಅಫ್ಘಾನಿಸ್ತಾನ್ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಸಜ್ಜು: ಗಿಲ್ ಹೆಗಲಿಗೆ ನಾಯಕತ್ವದ ಜವಾಬ್ದಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಟೂರ್ನಿ ಇನ್ನೇನ್ನು ಕೊನೆಯ ಹಂತ ತಲುಪಿದ್ದು, ಇದು ಮುಗಿದ ಬೆನ್ನಲ್ಲೇ ಟೀಮ್ ಇಂಡಿಯಾ ಮುಂದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಜ್ಜಾಗಬೇಕಿದೆ.

ಜೂನ್ 6 ರಿಂದ ಟೀಮ್ ಇಂಡಿಯಾವು ಅಫ್ಘಾನಿಸ್ತಾನ್ ವಿರುದ್ಧದ ತನ್ನ ಸರಣಿ ಆರಂಭಿಸಲಿದ್ದು, ಅದಕ್ಕಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದೆ.

ತಂಡಕ್ಕೆ ಗಿಲ್ ಸಾರಥಿ

ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗಾಗಿ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಕ್ಕೂ ಶುಭ್​ಮನ್ ಗಿಲ್ ಅವರ ಹೆಗಲಿಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಹಾಗೂ ಏಕದಿನ ತಂಡಕ್ಕೆ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

ಹೊಸ ಆಟಗಾರರ ಆಯ್ಕೆ

ಇತ್ತ ಈ ಬಾರಿ ಏಕದಿನ ತಂಡದಲ್ಲಿ ಮೂವರು ಹೊಸ ಆಟಗಾರರು ಕಾಣಿಸಿಕೊಂಡಿದ್ದು, ಟೆಸ್ಟ್ ತಂಡದಲ್ಲಿ ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.

ಅಫ್ಘಾನಿಸ್ತಾನ್ ವಿರುದ್ಧ ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲಿದೆ.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !