January16, 2026
Friday, January 16, 2026
spot_img

ದಕ್ಷಿಣ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ಸಜ್ಜು: ಪ್ಲೇಯಿಂಗ್ 11 ಕುತೂಹಲಕ್ಕೆ ಕೆ.ಎಲ್.ರಾಹುಲ್ ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಸೋಲಿನ ನಂತರ, ಟೀಂ ಇಂಡಿಯಾ ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯ ಮೂಲಕ ತಿರುಗೇಟು ನೀಡಲು ಸಜ್ಜಾಗಿದೆ. ಈ ಸರಣಿಯು ನಾಳೆ ರಾಂಚಿಯಲ್ಲಿ ಆರಂಭವಾಗಲಿದೆ.

ಏಕದಿನ ಸರಣಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮರಳಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಅಲ್ಲದೆ, ರಿಷಭ್ ಪಂತ್ ಮತ್ತು ರುತುರಾಜ್ ಗಾಯಕ್ವಾಡ್ ಅವರಂತಹ ಆಟಗಾರರು ಬಹಳ ದಿನಗಳ ನಂತರ ತಂಡದಲ್ಲಿ ಕಾಣಿಸಿಕೊಳ್ಳುತ್ತಿರುವುದು ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಪ್ರಶ್ನೆಗೆ ಕಾರಣವಾಗಿದೆ.

ಪ್ಲೇಯಿಂಗ್ 11 ಬಗ್ಗೆ ರಾಹುಲ್ ಮಾತು

ಪಂದ್ಯಕ್ಕೆ ಒಂದು ದಿನ ಮೊದಲು, ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದ ನಾಯಕ ಕೆ.ಎಲ್. ರಾಹುಲ್ ಅವರು ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಯಕನಾಗಿ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದ ರಾಹುಲ್, ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಖಚಿತಪಡಿಸಿದರು.

ರಾಹುಲ್ ಅವರು ಸರಣಿಯ ಉದ್ದಕ್ಕೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾಗಿ ಘೋಷಿಸಿದರು. “ನಾನು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತೇನೆ,” ಎಂದು ಸ್ಪಷ್ಟಪಡಿಸಿದ್ದಾರೆ. ಇದು ಟೀಂ ಇಂಡಿಯಾದ ಬ್ಯಾಟಿಂಗ್ ಸಮತೋಲನವನ್ನು ಕಾಪಾಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ.

ಚಾಂಪಿಯನ್ಸ್ ಟ್ರೋಫಿ ನಂತರ ತಂಡಕ್ಕೆ ಮರಳಿರುವ ರಿಷಭ್ ಪಂತ್ ಅವರ ಪಾತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ರಾಹುಲ್, “ಪಂತ್ ಅವರು ಕೇವಲ ಬ್ಯಾಟ್ಸ್‌ಮನ್ ಆಗಿ ಆಡುವ ಸಾಮರ್ಥ್ಯ ಹೊಂದಿದ್ದರೂ, ಅವರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸಿದರೆ, ವಿಕೆಟ್ ಕೀಪರ್ ಆಗಿ ಆಡುತ್ತಾರೆ” ಎಂದು ಹೇಳಿದರು. ಪಂತ್ ಅವರ ಪ್ರತಿಭೆಯ ಮಹತ್ವವನ್ನು ಒತ್ತಿ ಹೇಳಿದ ರಾಹುಲ್, ಅವರು ಕೀಪಿಂಗ್ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ ಎಂದು ಖಚಿತಪಡಿಸಿದರು.

Must Read

error: Content is protected !!