ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕ್ರಿಕೆಟ್ ತಂಡ 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದಿದೆ. ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಭಾರತ ತಂಡವನ್ನು ಅಭಿನಂದಿಸಿದ್ದಾರೆ.
“ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು! ಸೂರ್ಯಕುಮಾರ್ ಯಾದವ್ ಎಂತಹ ಅಮೋಘ ಕ್ಯಾಚ್! ಈ ಗೆಲುವು ರೋಹಿತ್ ಶರ್ಮಾ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ರಾಹುಲ್ ದ್ರಾವಿಡ್ ಬಗ್ಗೆ ಟೀಂ ಇಂಡಿಯಾ ಹೆಮ್ಮೆ ಪಡುತ್ತಿದೆ. ಟೀಂ ಇಂಡಿಯಾ ನಮ್ಮ ದೇಶಕ್ಕೆ ಕೀರ್ತಿ ತಂದಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Congratulations to Team India on a spectacular World Cup Victory and a phenomenal performance throughout the tournament!
Surya, what a brilliant catch! Rohit, this win is a testament to your leadership. Rahul, I know team India will miss your guidance.
The spectacular Men in… pic.twitter.com/lkYlu33egb
— Rahul Gandhi (@RahulGandhi) June 29, 2024