Friday, December 12, 2025

ಮತ್ತೊಂದು ಗೆಲುವಿನ ತವಕದಲ್ಲಿ ಟೀಮ್‌ ಇಂಡಿಯಾ: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಸೂರ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಪಂದ್ಯ ಚಂಡೀಗಢದ ಹೊಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ , ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಪಿಚ್​ನಲ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವ ಕಾರಣದಿಂದಾಗಿ ಬೌಲಿಂಗ್ ಮಾಡುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಪ್ರಕಟವಾಗಿದ್ದು, ಟೀಂ ಇಂಡಿಯಾ ತನ್ನ ಗೆಲುವಿನ ಸಂಯೋಜನೆಯನ್ನು ಬದಲಿಸಲು ಹೋಗಿಲ್ಲ. ಅಂದರೆ ಮೊದಲ ಪಂದ್ಯದಲ್ಲಿ ಆಡಿದ್ದ ತಂಡವೇ ಇಂದು ಸಹ ಕಣಕ್ಕಿಳಿಯುತ್ತಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಶಿವಂ ದುಬೆ, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೀರಾ, ಜಾರ್ಜ್ ಲಿಂಡಾ, ಮಾರ್ಕೊ ಯಾನ್ಸನ್, ಲುಥೋ ಸಿಪಾಮ್ಲಾ, ಲುಂಗಿ ಎನ್‌ಗಿಡಿ ಮತ್ತು ಒಟ್ನೀಲ್ ಬಾರ್ಟ್‌ಮನ್.

error: Content is protected !!