Saturday, December 9, 2023

Latest Posts

ಆತಂಕದಲ್ಲಿ ಟೀಂ ಇಂಡಿಯಾ: ಶುಭ್ ಮನ್ ಗಿಲ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಸ್ಟಾರ್ ಪ್ಲೇಯರ್ ಶುಭ್‌ಮನ್ ಗಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಶುಭ್‌ಮನ್ ಅವರನ್ನು ದಾಖಲಿಸಿದ್ದು, ಅಹಮದಾಬಾದ್‌ನಲ್ಲಿ ನಡೆಯುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಶುಭ್‌ಮನ್ ಅಲಭ್ಯವಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ನಡೆಯುವ ಭಾರತ-ಅಫ್ಘಾನಿಸ್ತಾನ ಪಂದ್ಯಕ್ಕೆ ಗಿಲ್ ಲಭ್ಯವಿಲ್ಲ, ಆದರೆ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಗಿಲ್ ಆಸ್ಪತ್ರೆ ಸೇರಿರುವುದರಿಂದ ಪಂದ್ಯಕ್ಕೆ ಅಲಭ್ಯವಾಗುವ ಸಾಧ್ಯತೆ ಕಾಣಿಸುತ್ತಿದೆ.

ಗಿಲ್ ಅವರಿಗೆ ಪ್ಲೇಟ್‌ಲೆಟ್‌ಗಳ ಕೊರತೆ ಇದೆ, ಹೀಗಿರುವಾಗ ಪ್ರಯಾಣ ಮಾಡುವುದು ಸೂಕ್ತವಲ್ಲ ಎಂದು ವೈದ್ಯರು ಸೂಚನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!