Sunday, August 14, 2022

Latest Posts

ಟಿ-20 ಸರಣಿಗೆ ಟೀಂ ಇಂಡಿಯಾ ಸಜ್ಜು: ಪ್ಲೇಯಿಂಗ್ ಇಲವೆನ್ ಸಂಭಾವ್ಯ ಪಟ್ಟಿ ಇಲ್ಲಿದೆ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೆಸ್ಟ್ ಇಂಡೀಸ್ ವಿರುದ್ಧದ ಟಿ- 20ಸರಣಿಗೆ ಭಾರತ ಭರ್ಜರಿ ತಯಾರಿ ನಡೆಸಿದೆ.
ಬುಧವಾರ ಈಡನ್ ಗಾರ್ಡನ್ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದೆ. ಇದೇ ವರ್ಷ ಆಸ್ಟ್ರೇಲಿಯಾದಲ್ಲಿ ಟಿ-20 ವಿಶ್ವಕಪ್ ಇರುವುದರಿಂದ ಈ ಸರಣಿ ಟೀಂ ಇಂಡಿಯಾಗೆ ಮುಖ್ಯವಾಗಿದೆ.
ಮೊದಲ ಪ್ಲೇಯಿಂಗ್ ಇಲವೆನ್ ಮೇಲೆ ಎಲ್ಲರ ಕಣ್ಣಿದ್ದು, ಯಾರನ್ನು ಆಯ್ಕೆ ಮಾಡಲಾಗುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ.

ಕೆ.ಎಲ್ ರಾಹುಲ್ ಇಂಜುರಿಯಿಂದಾಗಿ ಪಂದ್ಯದಿಂದ ಹೊರಗುಳಿದಿದ್ದು, ರೋಹಿತ್ ಶರ್ಮಾ ಜೊತೆ ಕಣಕ್ಕೆ ಇಳಿಯೋದು ಯಾರು ಎನ್ನುವ ಪ್ರಶ್ನೆ ಎದುರಾಗಿದೆ. ರೋಹಿತ್ ಜೊತೆ ಓಪನಿಂಗ್‌ನಲ್ಲಿ ಈ ಬಾರಿ ಇಶಾನ್ ಕಿಶನ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಈ ಬಾರಿ ಟಿ-20ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಪಟ್ಟಿ ಹೀಗಿರಬಹುದು..
ರೋಹಿತ್ ಶರ್ಮಾ, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದೀಪಕ್ ಹೂಡಾ, ದೀಪಕ್ ಚಹರ್/ಶಾರ್ದೂಲ್ ಠಾಕೂರ್, ಹರ್ಷಲ್ ಪಟೇಲ್/ ಆವೇಶ್ ಖಾನ್, ಭುವನೇಶ್ವರ್ ಕುಮಾರ್, ಯಜ್ವೇಂದ್ರ ಚಹಲ್/ ರವಿ ಬಿಷ್ಣೋಯ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss