ಅರ್ಜುನ ಪ್ರಶಸ್ತಿಗೆ ಟೀಮ್​ ಇಂಡಿಯಾ ವೇಗಿ ಮೊಹಮ್ಮದ್​ ಶಮಿ ಹೆಸರು ಶಿಫಾರಸು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಶ್ವಕಪ್​ ಟೂರ್ನಿಯಲ್ಲಿ ಗಮನಾರ್ಹ ಸಾಧನೆ ಮಾಡಿದ ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್​ ಶಮಿಗೆ ಅರ್ಜುನ ಪ್ರಶಸ್ತಿ ನೀಡಲು ಬಿಸಿಸಿಐ ಶಿಫಾರಸು ಮಾಡಿದೆ.

ತಮ್ಮ ಮಿಂಚಿನ ಬೌಲಿಂಗ್​ ದಾಳಿಯಿಂದ ಕಡಿಮೆ ಪಂದ್ಯದಲ್ಲಿ ಅತ್ಯಧಿಕ ವಿಕೆಟ್​ ಪಡೆದು ಮಿಂಚಿದ ಮೊಹಮ್ಮದ್​ ಶಮಿಗೆ ಪ್ರಶಸ್ತಿ ನೀಡಲು ಬಿಸಿಸಿಐ ವಿಶೇಷವಾಗಿ ಆಯ್ಕೆ ಸಮಿತಿಗೆ ಶಿಫಾರಸು ಮಾಡಿದೆ. ನಾಮನಿರ್ದೇಶಿತರ ಪಟ್ಟಿಯಲ್ಲಿ ಶಮಿ ಹೆಸರು ಇರಲಿಲ್ಲ. ಆದರೆ, ಬಿಸಿಸಿಐನ ವಿಶೇಷ ಮನವಿಯ ಪರವಾಗಿ ನಾಮನಿರ್ದೇಶನ ಪಟ್ಟಿಯಲ್ಲಿ ಸೇರಿಸಲಾಗಿದೆ .

ವಿಶ್ವಕಪ್​ ಟೂರ್ನಿಯಲ್ಲೇ ಅತ್ಯಧಿಕ ವಿಕೆಟ್​ ಪಡೆದ ಖ್ಯಾತಿಯನ್ನು ಶಮಿ ಹೊಂದಿದ್ದಾರೆ. ಮೊದಲ 4 ಪಂದ್ಯಗಳಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದ ಶಮಿ, ಆಲ್​​ರೌಂಡರ್​ ಹಾರ್ದಿಕ್​ ಪಾಂಡ್ಯ ಗಾಯಗೊಂಡ ಬಳಿಕ ಆಡುವ ಹನ್ನೊಂದರ ಬಳಗ ಸೇರಿಕೊಂಡರು. ಕೇವಲ 7 ಪಂದ್ಯಗಳಲ್ಲಿ 24 ವಿಕೆಟ್​ ಪಡೆಯುವ ಮೂಲಕ ಕ್ರೀಡಾ ಜಗತ್ತಿನ ಗಮನ ಸೆಳೆದರು.

ಶಮಿ ಏಳು ಪಂದ್ಯಗಳಲ್ಲಿ ಮೂರು ಬಾರಿ ಐದು ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನು ಪೂರೈಸಿದ ಆಟಗಾರರ ಸಾಲಿಗೆ ಸೇರಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತ ನಂತರ ತೀವ್ರ ದುಃಖಕ್ಕೆ ಜಾರಿದ ಶಮಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದರು. ಈ ವಿಡಿಯೋ ಸಹ ಎಲ್ಲೆಡೆ ವೈರಲ್​ ಆಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!