ಟೀಂ ಇಂಡಿಯಾ ಆಟಗಾರ ರಿಂಕು ಸಿಂಗ್‌ ಗೆ ಕೂಡಿ ಬಂತು ಕಂಕಣಭಾಗ್ಯ: ಹುಡುಗಿ ಯಾರು ಗೊತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾದ ಟಿ20 ಆಟಗಾರ ರಿಂಕು ಸಿಂಗ್‌ ಉತ್ತರ ಪ್ರದೇಶದ ಮಚಿಲ್‌ಶಹರ್‌ನ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ ಈ ಇಬ್ಬರು ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಸುದ್ದಿಯನ್ನು ಎರಡು ಕುಟುಂಬದವರು ಅಲ್ಲಗಳೆದಿದ್ದಾರೆ. ಆದಾಗ್ಯೂ ಈ ಬಗ್ಗೆ ಮಾತುಕತೆ ನಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯ ಬಗ್ಗೆ ಪ್ರಿಯಾ ಅವರ ತಂದೆ ತುಫಾನಿ ಸರೋಜ್‌ ಪ್ರತಿಕ್ರಿಯಿಸಿ, ರಿಂಕು ಅವರ ಕುಟುಂಬ ಮದುವೆ ಪ್ರಸ್ತಾಪ ಕಳುಹಿಸಿದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದು ತಿಳಿಸಿದರು.

Rinku- Priyaಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಈ ಸುದ್ದಿಯ ಬಗ್ಗೆ ಇಲ್ಲಿಯವರೆಗೆ ರಿಂಕು ಸಿಂಗ್‌ ಆಗಲಿ ಸಂಸದೆ ಪ್ರಿಯಾ ಸರೋಜ್‌ ಖಚಿತಪಡಿಸಿಲ್ಲ.

ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಸದಸ್ಯರಾಗಿದ್ದ ರಿಂಕು ಮುಂದಿನ ವಾರದಿಂದ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಲಿದ್ದಾರೆ.

27 ವರ್ಷದ ರಿಂಕು ಆಗಸ್ಟ್ 2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನಂತರ ಇಲ್ಲಿಯವರೆಗೆ ಎರಡು ಏಕದಿನ ಮತ್ತು 30 ಟಿ20 ಪಂದ್ಯಗಳನ್ನು ಆಡಿದ್ದಾರೆ.

ಪ್ರಿಯಾ ಅವರು ಉತ್ತರ ಪ್ರದೇಶದ ಮಚ್ಲಿಶಹರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆ ಆಗಿದ್ದಾರೆ. ಪ್ರಿಯಾ ಅವರ ತಂದೆ ತುಫಾನಿ ಸರೋಜ್ ಅವರು ಮೂರು ಬಾರಿ ಸಂಸದರಾಗಿದ್ದಾರೆ ಮತ್ತು ಹಾಲಿ ಕೆರಕಟ್‌ ಕ್ಷೇತ್ರದ ಶಾಸಕರಾಗಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!