Saturday, December 9, 2023

Latest Posts

ICC WORLD CUP | ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಟೀಂ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿನ್ನೆಯಷ್ಟೇ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಫ್ಘನ್ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವುನಿಂದ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಎರಡನೇ ಸ್ಥಾನಕ್ಕೆ ಏರಿದೆ. ಅಫ್ಘಾನಿಸ್ತಾನವನ್ನು ಎಂಟು ವಿಕೆಟ್‌ಗಳಿಂದ ಮಣಿಸಿದ ಭಾರತ ವಿಶ್ವಕಪ್‌ನಲ್ಲಿ ಸತತ ಎರಡನೇ ಗೆಲುವು ಕಂಡಿದೆ.

ಇನ್ನೂ 15 ಓವರ್ ಬಾಕಿ ಇದ್ದಂತೆಯೇ ಆಫ್ಘಾನ್ ಮಣಿಸಿ ಪಾಯಿಂಟ್ ಹೆಚ್ಚಿಸಿಕೊಂಡಿದೆ. ಇದೀಗ ವಿಶ್ವಕಪ್ ಅಂಕಪಟ್ಟಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಹಿಂದಿಕ್ಕಿ ಭಾರತ ಎರಡನೇ ಸ್ಥಾನಕ್ಕೆ ಏರಿದೆ.

ಇಂಗ್ಲೆಂಡ್ ಹಾಗೂ ನೆದರ್ಲ್ಯಾಂಡ್ಸ್ ವಿರುದ್ಧ ಸುಲಭ ಗೆಲುವು ಸಾಧಿಸಿದ ನ್ಯೂಜಿಲೆಂಡ್ ವಿಶ್ವಕಪ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಭಾರತ ಹಾಗೂ ನ್ಯೂಜಿಲೆಂಡ್ ಎರಡೂ ನಾಲ್ಕು ಅಂಕವನನ್ನು ಹೊಂದಿದೆ. ಆದರೆ ನ್ಯೂಜಿಲೆಂಡ್ ರನ್‌ರೇಟ್ ಉತ್ತಮವಾಗಿದೆ.

ಪಾಕಿಸ್ತಾನ ಎರಡನೇ ಸ್ಥಾನದಲ್ಲಿತ್ತು, ಇದೀಗ ಭಾರತದ ಗೆಲುವಿನಿಂದಾಗಿ ಎರಡನೇ ಸ್ಥಾನದಿಂದ ಕೆಳಕ್ಕೆ ಜಿಗಿದು ಮೂರನೇ ಸ್ಥಾನದಲ್ಲಿ ಸೆಟಲ್ ಆಗಿದೆ. ಪಾಕ್ ಕೂಡ ಆಡಿರುವ ಎರಡೂ ಪಂದ್ಯವನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ ನಾಲ್ಕನೇ ಸ್ಥಾನ ಹಾಗೂ ಇಂಗ್ಲೆಂಡ್ ಐದನೇ ಸ್ಥಾನದಲ್ಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!