ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ರೆಡಿ: ಸಂಭಾವ್ಯ ಆಟಗಾರರ ಪಟ್ಟಿ ಇಂತಿದೆ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ನಂತರ ಇದೀಗ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯ ಹಾಗೂ ಟಿ20 ಸರಣಿಗೆ ಸಜ್ಜಾಗುತ್ತಿದೆ.ಟೀಂ ಇಂಡಿಯಾ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಟಿ20 ಸರಣಿ ಆಡಲಿದೆ. ಇದೇ ಫೆ.6ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯಗಳು ಆರಂಭವಾಗಲಿದೆ.

ಇನ್ನೇನು ಸರಣಿಗೆ ಕೆಲವೇ ದಿನಗಳಿದ್ದು, ಇನ್ನೂ ಬಿಸಿಸಿಐ ತಂಡ ಪ್ರಕಟ ಮಾಡಿಲ್ಲ. ಇಂಜುರಿಯಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಇದೀಗ ವಾಪಸಾಗಲಿದ್ದಾರೆ. ಇನ್ನು ತಂಡದಲ್ಲಿ ಹೊಸ ಮುಖಗಳು ಇರುವ ಸಾಧ್ಯತೆ ಕೂಡ ಇದೆ.

ಆಟಗಾರರ ಸಂಭಾವ್ಯ ಪಟ್ಟಿ ಇಂತಿದೆ.. ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್,ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಯಜುವೇಂದ್ರ ಚಹಲ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್/ ಮೊಹಮ್ಮದ್ ಶಮಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!