ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎರಡನೇ ಟಿ20 ಪಂದ್ಯ ನಾಳೆ (ಅಕ್ಟೋಬರ್ 31) ಮೆಲ್ಬರ್ನ್ ನ ಪ್ರಸಿದ್ಧ ಎಂಸಿಜಿ ಮೈದಾನದಲ್ಲಿ ನಡೆಯಲಿದ್ದು, ಟೀಂ ಇಂಡಿಯಾ ಯಾವುದೇ ದೊಡ್ಡ ಬದಲಾವಣೆ ಇಲ್ಲದೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೊದಲ ಪಂದ್ಯ ಮಳೆಯಿಂದ ರದ್ದಾದ ಹಿನ್ನೆಲೆ, ಆ ಪಂದ್ಯಕ್ಕೆ ಆಯ್ಕೆಗೊಂಡ ಆಟಗಾರರನ್ನೇ ಮತ್ತೊಮ್ಮೆ ತಂಡದಲ್ಲಿ ಕಾಣಬಹುದಾಗಿದೆ.
ಟೀಂ ಇಂಡಿಯಾದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಬೆನ್ನಿನ ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯಕೀಯ ಸಲಹೆಯ ಮೇರೆಗೆ ಎರಡನೇ ಮತ್ತು ಮೂರನೇ ಪಂದ್ಯಗಳಿಗೂ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ನಾಳೆಯ ಪಂದ್ಯದಲ್ಲೂ ಅವರು ಕಣಕ್ಕಿಳಿಯುವ ಸಾಧ್ಯತೆ ಇಲ್ಲ.
ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ (ಮಳೆ ಕಾರಣದಿಂದ ರದ್ದು) ಆಡಬೇಕಿದ್ದ ತಂಡವನ್ನೇ ಮೆಲ್ಬರ್ನ್ ಮೈದಾನದಲ್ಲೂ ಮುಂದುವರಿಸುವ ಯೋಜನೆ ಇದೆ. ಆದರೆ ಬೌಲಿಂಗ್ ವಿಭಾಗದಲ್ಲಿ ಸಣ್ಣ ಬದಲಾವಣೆಯ ಸಾಧ್ಯತೆಯಿದ್ದು, ಅರ್ಷದೀಪ್ ಸಿಂಗ್ ಬದಲಿಗೆ ಹರ್ಷಿತ್ ರಾಣಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11:
ಅಭಿಷೇಕ್ ಶರ್ಮಾ, ಶುಭ್‌ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಜಸ್‌ಪ್ರೀತ್ ಬುಮ್ರಾ.

