ಕ್ಲೀನ್ ಸ್ವೀಪ್ ಗೆ ಸಜ್ಜಾದ ಟೀಮ್ ಇಂಡಿಯಾ: ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಲು ಸಜ್ಜಾಗಿದ್ದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅವೇಶ್ ಖಾನ್ ಬದಲು ಪ್ರಸಿದ್ಧ್ ಕೃಷ್ಣ ತಂಡ ಸೇರಿಕೊಂಡಿದ್ದಾರೆ.
ವೆಸ್ಟ್ ಇಂಡೀಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಕೋವಿಡ್ ಕಾರಣದಿಂದ ಕಳೆದೆರಡು ಪಂದ್ಯದಿಂದ ಹೊರಗುಳಿದಿದ್ದ ಜೇಸನ್ ಹೋಲ್ಡರ್ ಇಂದಿನ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇದರ ಜೊತೆಗೆ ಕೀಮೋ ಪೌಲ್ ಹಾಗೂ ಕಾರ್ಟಿ ತಂಡ ಸೇರಿಕೊಂಡಿದ್ದಾರೆ.
ಶಿಖರ್ ಧವನ್ ನಾಯಕತ್ವದ ಟೀಂ ಇಂಡಿಯಾ ವಿಂಡೀಸ್ ಪ್ರವಾಸದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಇದೀಗ ಅಂತಿಮ ಪಂದ್ಯ ಕೈವಶ ಮಾಡಿ 3-0 ಅಂತರದಲ್ಲಿ ಸರಣಿ ಗೆಲುವಿಗೆ ರೆಡಿಯಾಗಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11
ಶಿಖರ್ ಧವನ್(ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ದೀಪಕ್ ಹೂಡ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಹಾಲ್, ಪ್ರಸಿದ್ದ ಕಷ್ಣ

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11
ಶೈ ಹೋಪ್, ಬ್ರ್ಯಾಂಡನ್ ಕಿಂಗ್, ಕೈಸಿ ಕಾರ್ಟಿ, ಶಮ್ರ ಬ್ರೂಕ್ಸ್, ನಿಕೋಲಸ್ ಪೂರನ್(ನಾಯಕ), ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಕೀಮೋ ಪೌಲ್, ಅಕಿಯಲ್ ಹುಸೈನ್, ಹೈಡನ್ ವಾಲ್ಶ್, ಜೈಡೆನ್ ಸೀಲ್ಸ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!