ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಮುಗಿದ ನಂತರ ಟೀಂ ಇಂಡಿಯಾ ಆಟಗಾರರು ಇಂಗ್ಲೆಂಡ್ ನೆಲಕ್ಕೆ ಬಂದಿಳಿದರು. ಪ್ರತಿಷ್ಠಿತ ಭಾರತ-ಆಸ್ಟ್ರೇಲಿಯಾ WTC ಫೈನಲ್ ಮೂರು ದಿನಗಳಲ್ಲಿ ಲಂಡನ್‌ನ ಓವಲ್‌ನಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ಹೊಸ ಜೆರ್ಸಿಯೊಂದಿಗೆ ಅಖಾಡಕ್ಕಿಳಿಯಲಿದ್ದಾರೆ. ಅಡೀಡಸ್ ಗುರುವಾರ ಮೂರು ಮಾದರಿಗಳಲ್ಲಿ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಬಿಸಿಸಿಐ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಹೊಸ ಜೆರ್ಸಿ ಧರಿಸಿರುವ ವಿಡಿಯೋವನ್ನು ಪೋಸ್ಟ್ ಮಾಡಿದೆ.
ಟೀಂ ಇಂಡಿಯಾ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ, ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ಕೌರ್, ಸ್ಮೃತಿ ಮಂಧಾನ ಸೇರಿದಂತೆ ಇತರ ಮಹಿಳಾ ಕ್ರಿಕೆಟಿಗರು ಹೊಸ ಜೆರ್ಸಿಯನ್ನು ಧರಿಸಿದ್ದರು. ಬಿಸಿಸಿಐ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಶನಿವಾರ ವಿಡಿಯೋ ಪೋಸ್ಟ್ ಮಾಡಿದೆ. ಟೀಂ ಇಂಡಿಯಾ ಆಟಗಾರರು ಧರಿಸುವ ಹೊಸ ಜೆರ್ಸಿ ಬೆಲೆ 4,999 ರೂಪಾಯಿ.
ಐಸಿಸಿ ಕ್ರಿಕೆಟ್ ವಿಶ್ವಕಪ್ ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿದೆ. ಈ ಹೊಸ ಜೆರ್ಸಿಯೊಂದಿಗೆ ಟೀಂ ಇಂಡಿಯಾ ಆಟಗಾರರು ಅಖಾಡಕ್ಕಿಳಿಯಲಿದ್ದಾರೆ. ಜೂನ್ 7 ರಿಂದ ಲಂಡನ್‌ನಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ WTC ಫೈನಲ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಹೊಸ ಜೆರ್ಸಿಯನ್ನು ಧರಿಸಲಿದ್ದಾರೆ.