ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 184 ರನ್‌ಗಳ ಭರ್ಜರಿ ಜಯ ಸಾಧಿಸಿದೆ.
4ನೇ ಟೆಸ್ಟ್‌ಗೆಲ್ಲಲು 340 ರನ್‌ಗಳ ಗುರಿಯನ್ನು ಪಡೆದ ಭಾರತ 79.1 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯ್ತು. 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದ ಮುನ್ನಡೆ ಸಾಧಿಸಿದೆ. 4ನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 474 ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಭಾರತ 369 ರನ್ಗಳಿಸಿತ್ತು. ಇದರೊಂದಿಗೆ ಆಸ್ಟ್ರೇಲಿಯಾ 105 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. ಎರಡನೇ ಇನ್ನಿಂಗ್ಸ್ನಲ್ಲಿ 234 ರನ್ಗಳಿಸಿದ್ದ ಆಸ್ಟ್ರೇಲಿಯಾ ಭಾರತದ ಗೆಲುವಿಗೆ ಒಟ್ಟು 339 ರನ್‌ಗಳ ಗುರಿಯನ್ನು ನೀಡಿತ್ತು. ಭಾರತ ಎರಡನೇ ಇನ್ನಿಂಗ್ಸ್ನಲ್ಲಿ 155 ರನ್ಗಳಿಸಿ ಸೋಲಿಗೆ ಶರಣಾಗಿದೆ.