January17, 2026
Saturday, January 17, 2026
spot_img

ಟೀಂ ಇಂಡಿಯಾ ಉಪನಾಯಕ ಶ್ರೇಯಸ್‌ ಐಯ್ಯರ್‌ ಐಸಿಯುಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್‌ರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಅವರನ್ನು ಐಸಿಯುನಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.

ಶ್ರೇಯಸ್ ಅಯ್ಯರ್ ಅವರ ಪೆಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗದಲ್ಲಿ ಆಂತರಿಕ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದೇ ಕಾರಣದಿಂದಾಗಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.

ಸದ್ಯ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೇಯಸ್ ಅಯ್ಯರ್ ಇನ್ನೂ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಲಿದ್ದಾರೆ.  ಅಲ್ಲದೆ ಮುಂದಿನ 48 ಗಂಟೆಗಳಲ್ಲಿ ರಕ್ತಸ್ರಾವ ಕಡಿಮೆಯಾಗದಿದ್ದರೆ ಅವರ ವಾಸ್ತವ್ಯವನ್ನು ವಿಸ್ತರಿಸಬಹುದು ಎಂದು ತಿಳಿದುಬಂದಿದೆ.

ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್​ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟು ಬಿದ್ದಿದೆ. ಈ ಹೊಡೆತದ ನೋವಿನಿಂದ ನರಳಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಕ್ಷಣವೇ ವೈದ್ಯರಲ್ಲಿಗೆ ಕರೆದೊಯ್ಯಲಾಗಿತ್ತು. ಇದೀಗ ಸಿಡ್ನಿಯಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯವು ಗಂಭೀರವಾಗಿರುವ ಕಾರಣ ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.

Must Read

error: Content is protected !!