ಬಾಂಗ್ಲಾದೇಶ ವಿರುದ್ಧ ಗೆದ್ದು ಬೀಗಿದ ಟೀಮ್ ಇಂಡಿಯಾ ವನಿತೆಯರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವನಿತೆಯರ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದ್ದಾರೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದಾರೆ.

ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕಿ ನಿಗರ್ ಸುಲ್ತಾನ ಬೌಲಿಂಗ್ ಆಯ್ದುಕೊಂಡಿದ್ದರು. ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮತ್ತೊಮ್ಮೆ ಆರಂಭಿಕ ವೈಫಲ್ಯಕ್ಕೀಡಾಯಿತು. ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 228 ರನ್​ ಕಲೆಹಾಕಿತು.

229 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡಕ್ಕೆ ಬೌಲಿಂಗ್ ಮೂಲಕ ಕೂಡ ಜೆಮಿಮಾ ರೊಡ್ರಿಗಸ್ ಆಘಾತ ನೀಡಿದರು. ಆರಂಭದಲ್ಲೇ ಮುರ್ಶಿದಾ ಖಾತುನ್ (12) ವಿಕೆಟ್ ಕಬಳಿಸಿ ಮೇಘನಾ ಮೊದಲ ಯಶಸ್ಸು ತಂದುಕೊಟ್ಟರೆ, ಇದರ ಬೆನ್ನಲ್ಲೇ ದೀಪ್ತಿ ಶರ್ಮಾ 2ನೇ ವಿಕೆಟ್ ಕಬಳಿಸಿದರು. ಇನ್ನು ಸ್ನೇಹ್ ರಾಣಾ 3ನೇ ವಿಕೆಟ್ ಪಡೆದರು. 35.1 ಓವರ್​ಗಳಲ್ಲಿ ಬಾಂಗ್ಲಾದೇಶ್ ತಂಡವು 120 ರನ್​ಗಳಿಸಿ ಆಲೌಟ್ ಆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!