ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೇಷ್ಯಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಿತು.
ಜನವರಿ 31ರ ಶುಕ್ರವಾರ ನಡೆದ ಈ ಪಂದ್ಯದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು 9 ವಿಕೆಟ್ ಗಳಿಂದ ಸೋಲಿಸಿತು. ಇದರೊಂದಿಗೆ ಸತತ ಎರಡನೇ ಬಾರಿಗೆ ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ.
ಇನ್ನು ಈ ಪಂದ್ಯಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಅಂದರೆ ಇದೀಗ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಫೆಬ್ರವರಿ 2 ಭಾನುವಾರ ನಡೆಯಲಿದೆ.