Sunday, December 10, 2023

Latest Posts

ನೆದರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಕ್ಕೆ 160 ರನ್ ಗಳ ಭರ್ಜರಿ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ನೆದರ್ಲೆಂಡ್ ವಿರುದ್ಧ ಭಾರತ 160 ರನ್ ಭರ್ಜರಿ ಗೆಲುವು ದಾಖಲಿಸಿದೆ.

ಭಾರತ ನೀಡಿದ್ದ 410 ರನ್ ಗುರಿ ನೋಡಿ ಬೆನ್ನತ್ತಿದ್ದ ನೆದರ್ಲೆಂಡ್ 250 ರನ್‌ಗೆ ಆಲೌಟ್ ಆಗಿದೆ.

ಈ ಪಂದ್ಯದಲ್ಲಿ ಮತ್ತೊಂದು ವಿಶೇಷ ಅಂದರೆ ಕೀಪರ್ ಹಾಗೂ ಶ್ರೇಯಸ್ ಅಯ್ಯರ್ ಹೊರತುಪಡಿಸಿ ಇನ್ನೆಲ್ಲರು ಬೌಲಿಂಗ್ ಮಾಡಿದ್ದಾರೆ. ಇಷ್ಟೇ ಅಲ್ಲ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ತಲಾ 2 ವಿಕೆಟ್ ಕಬಳಿಸಿದರು. ಸ್ಪಿನ್ನರ್ ಪೈಕಿ ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಬಳಿಸಿದ್ದರು. ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿ ನೆದರ್ಲೆಂಡ್ ತಂಡವನ್ನು ಆಲೌಟ್ ಮಾಡಿದರು.

ಲೀಗ್ ಹಂತದ ಎಲ್ಲಾ 9 ಪಂದ್ಯ ಗೆದ್ದ ಭಾರತ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಜೇಯ ದಾಖಲೆಯನ್ನು ಉತ್ತಮಪಡಿಸಿಕೊಂಡಿದೆ. 2003ರ ವಿಶ್ವಕಪ್‌ನಲ್ಲಿ ಬಾರತ ಸತತ 8 ಪಂದ್ಯ ಗೆದ್ದ ಸಾಧನೆ ಮಾಡಿತ್ತು. ಇದೀಗ 9 ಪಂದ್ಯ ಗೆದ್ದು ದಾಖಲೆ ಬರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!