ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕದಿನ ವಿಶ್ವಕಪ್ನ ಅಂತಿಮ ಲೀಗ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ರೋಹಿತ್ ಪಡೆ ಸತತ ಗೆಲುವಿನೊಂದಿಗೆ ಧಾವಿಸಲಿದೆ. ಆಡಿದ ಎಂಟು ಪಂದ್ಯಗಳಲ್ಲಿ ಎಂಟರಲ್ಲಿ ಗೆದ್ದಿರುವ ಅವರು ಈಗಾಗಲೇ ಸೆಮಿಸ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಲೀಗ್ ಹಂತದಲ್ಲಿ ನೆದರ್ಲೆಂಡ್ ತಂಡವನ್ನು ಎದುರಿಸುತ್ತಿದೆ.
ಭಾರತ ತಂಡದ ಆಟಗಾರರು
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ತಂಡದಲ್ಲಿದ್ದಾರೆ.
ನೆದರ್ಲ್ಯಾಂಡ್ ತಂಡದ ಆಟಗಾರರು
ಸ್ಕಾಟ್ ಎಡ್ವರ್ಡ್ಸ್ (ಕ್ಯಾಪ್ಟನ್), ವೆಸ್ಲಿ ಬರೇಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಸೈಬ್ರಾಂಡ್ ಎಂಗೆಲ್ಬ್ರೆಕ್ಟ್, ಬಾಸ್ ಡಿ ಲೀಡ್, ತೇಜಾ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್ ತಂಡದಲ್ಲಿದ್ದಾರೆ.