Sunday, October 1, 2023

Latest Posts

ಏಷ್ಯಾಕಪ್ 2023| ಟಾಸ್ ಗೆದ್ದ ಟೀಂ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್‌ನ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ನೇಪಾಳ ಎದುರಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿದೆ.

ಶ್ರೀಲಂಕಾದ ಪಲ್ಲೆಕಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾ
ಈ ಬಾರಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪಾಕಿಸ್ತಾನದ ವಿರುದ್ಧದ ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿತ್ತು. ಆದರೆ ಮಳೆಯಿಂದಾಗಿ ಪಂದ್ಯ ರದ್ದಾಗಿತ್ತು. ಇದೇ ಮೊದಲ ಬಾರಿಗೆ ನೇಪಾಳ ಹಾಗೂ ಭಾರತ ಎದುರಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸೂಪರ್-4ಹಂತಕ್ಕೆ ಶಿಫ್ಟ್ ಆಗಲಿದೆ. ನೇಪಾಳಕ್ಕೂ ಸೂಪರ್-4 ತಲುಪಲು ಇದು ಕೊನೆಯ ಅವಕಾಶವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!