Wednesday, February 21, 2024

ಐಸಿಸಿ ವರ್ಷದ ಟಿ20 ತಂಡಕ್ಕೆ ಟೀಮ್ ಇಂಡಿಯಾದ ಸೂರ್ಯಕುಮಾರ್ ಸಾರಥಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್, 2023ರಲ್ಲಿ ತೋರಿದ ಅದ್ಭುತ ಬ್ಯಾಟಿಂಗ್ ನಿಂದ ಐಸಿಸಿ ವರ್ಷದ ಟಿ20 ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಅರಂಭಿಕ ಯಶಸ್ವಿ ಜೈಸ್ವಾಲ್, ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ಎಡಗೈ ವೇಗಿ ಅರ್ಷದೀಪ್ ಸಿಂಗ್ ತಂಡದಲ್ಲಿರುವ ಇತರ ಭಾರತೀಯರು. ಜಿಂಬಾಬ್ವೆಯ ಇಬ್ಬರು, ಉಗಾಂಡ, ಇಂಗ್ಲೆಂಡ್, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್‌ನ ತಲಾ ಒಬ್ಬರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಏಕದಿನ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡದ ಒಬ್ಬ ಆಟಗಾರನೂ ತಂಡದಲ್ಲಿಲ್ಲ.

33 ವರ್ಷದ, ಸೂರ್ಯಕುಮಾರ್ 2023ರಲ್ಲಿ ಆಡಿದ 17 ಇನಿಂಗ್ಸ್‌ಗಳಲ್ಲಿ 155.95 ಸರಾಸರಿಯಲ್ಲಿ 733 ರನ್ ಬಾರಿಸಿದ್ದು, ಇದರಲ್ಲಿ ಎರಡು ಶತಕಗಳು ಸೇರಿವೆ.

ಹಾರ್ದಿಕ್ ಪಾಂಡ್ಯ ಹಾಗೂ ಹಿರಿಯ ಆಟಗಾರರ ಗೈರಿನಲ್ಲಿ ಟೀಮ್ ಇಂಡಿಯಾ ಟಿ20 ತಂಡವನ್ನು ಮುನ್ನಡೆಸಿದ್ದ ಸೂರ್ಯ, ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸರಣಿ ಜಯಿಸಿದರೆ, ದ.ಆಫ್ರಿಕಾ ಎದುರು ಸಮಬಲ ಸಾಧಿಸಿದರು.

ಐಸಿಸಿ ವರ್ಷದ ಟಿ20 ತಂಡ: ಯಶಸ್ವಿ ಜೈಸ್ವಾಲ್, ಫಿಲ್ ಸಾಲ್ಟ್, ನಿಕೋಲಸ್ ಪೂರನ್ (ವಿ.ಕೀ), ಸೂರ್ಯಕುಮಾರ್ ಯಾದವ್ (ನಾಯಕ), ಮಾರ್ಕ್ ಚಾಪ್‌ಮನ್, ಸಿಕಂದರ್ ರಾಜಾ, ಅಲ್ಪೇಶ್ ರಾಮ್‌ಜನಿ, ಮಾರ್ಕ್ ಅದೀರ್, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ರಿಚರ್ಡ್ ಎನ್‌ಗವರ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!