ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್ ಟೂರ್ನಿಯಲ್ಲಿ ಭಾರತ ಗೆಲುವಿನ ಓಟ ಮುಂದುವರಿದಿದ್ದು, ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಟೀಂ ಇಂಡಿಯಾ 100 ರನ್ ಗಳ ಗೆಲುವು ಸಾಧಿಸಿದೆ.
ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಕುಲ್ದೀಪ್ ಯಾದವ್ ಬೌಲಿಂಗ್‍ಗೆ ಆಂಗ್ಲರ ಪಡೆ ತತ್ತರಿಸಿತು. ಕೇವಲ 129 ರನ್‌ಗೆ ಇಂಗ್ಲೆಂಡ್ ಆಲೌಟ್ ಆಗಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತಗೊಂಡಿದೆ.
ಡೇವಿಡ್ ಮಲನ್ 16 ರನ್‌ಗೆ ಔಟಾದರು.ಇತ್ತ ಜೋ ರೂಟ್ ಡಕೌಟ್ ಆದರು.30 ರನ್‌ಗೆ ಇಂಗ್ಲೆಂಡ್ 2 ವಿಕೆಟ್ ಕಳೆದುಕೊಂಡಿತು. ಇದರ ಬೆನ್ನಲ್ಲೇ ಬೆನ್ ಸ್ಟೋಕ್ಸ್ ಕೂಡ ಶೂನ್ಯ ಸುತ್ತಿದರು. ಜಾನಿ ಬೈರ್‌ಸ್ಟೋ ಕೇವಲ 14 ರನ್ ಸಿಡಿಸಿ ನಿರ್ಗಮಿಸಿದರು.ಜೋಸ್ ಬಟ್ಲರ್ 10 ಹಾಗೂ ಮೋಯಿನ್ ಆಲಿ 15 ರನ್ ಸಿಡಿಸಿ ಪೆವಿಲಿಯನ್ ಸೇರಿದರು.
ಇತ್ತ 27 ರನ್ ಸಿಡಿಸಿದ ಲಿಯಾಮ್ ಲಿವಿಂಗ್‌ಸ್ಟೋನ್ ವಿಕೆಟ್ ಪತನ ಇಂಗ್ಲೆಂಡ್ ತಂಡದ ಸೋಲಿನ ಸಂಕಷ್ಟ ಹೆಚ್ಚಿಸಿತು. ಆದಿಲ್ ರಶೀದ್ 13 ರನ್ ಸಿಡಿಸಿ ಔಟಾದರು. ಮಾರ್ಕ್ ವುಡ್ ವಿಕೆಟ್ ಪತನದೊಂದಿಗೆ ಇಂಗ್ಲೆಂಡ್ 34.5 ಓವರ್‌ಗಲ್ಲಿ 129 ರನ್‌ಗೆ ಆಲೌಟ್ ಆಯಿತು.