ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮಂಗಳೂರು:
ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವ ಲಕ್ಷಣ ಗೋಚರಿಸಿದೆ. ಮಿದುಳಿನಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಿರ್ವಹಿಸಲಾಗಿದೆ.
ಸೋಮವಾರ ತಡರಾತ್ರಿಯಿಂದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ಆರಂಭಿಸಿದ್ದು, ಮಂಗಳವಾರ ಮುಂಜಾನೆ ವೇಳೆಗೆ ಪೂರ್ಣಗೊಳಿಸಲಾಗಿದೆ.
ಜು.18ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಬಿದ್ದು ತಲೆಗೆ ಗಾಯಗೊಂಡಿದ್ದ ಆಸ್ಕರ್ ಅವರನ್ನು ಮರುದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಏರು ಪೇರಾಗಿದ್ದು ತಲೆಯಲ್ಲಿ ರಕ್ತ ಹೆಪ್ಪುಗಟ್ಡಿರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಆ ಬಳಿಕ ಆಸ್ಕರ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ವೈದ್ಯರ ಸತತ ಶ್ರಮದಿಂದ ಶಸ್ತ್ರ ಕ್ರಿಯೆ ನಡೆಸಲಾಗಿದ್ದು, ವಾರದೊಳಗೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ನಗರದ ಖ್ಯಾತ ನ್ಯೂರೋ ಸರ್ಜನ್ ಡಾ.ಸುನಿಲ್ ಶೆಟ್ಟಿ ನೇತೃತ್ವದ ತಂಡ ಸೋಮವಾರ ತಡರಾತ್ರಿ 12.30ರಿಂದ ಶಸ್ತ್ರಕ್ರಿಯೆ ಪ್ರಕ್ರಿಯೆ ಆರಂಭಿಸಿತ್ತು. ಇದೀಗ ಹೆಪ್ಪುಗಟ್ಟಿದ ರಕ್ತವನ್ನು ಸಂಪೂರ್ಣವಾಗಿ ತೆಗೆದಿರುವುದರಿಂದ ಬೇಗನೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.