ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕರು ನನ್ನ ಮನನೋಯಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಹೇಳಿಕೆಯನ್ನು ನಾನು ಗಮನಿಸುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ಉಪಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಇದಕ್ಕೆ ಸಮಯ ಉತ್ತರ ನೀಡಲಿದೆ ಎಂದು ಟಾಂಗ್ ನೀಡಿದ್ದಾರೆ.
ಯಧುವೀರ್ ಒಡೆಯರ್ ಅವರು ನಿಖಿಲ್ ಕುಮಾರಸ್ವಾಮಿ ಪರ ಇಂದು ಪ್ರಚಾರ ನಡೆಸುತ್ತಿದ್ದಾರೆ. ತಾವಾಗಿಯೇ ಸಮಯ ಮಾಡಿಕೊಂಡು ಚನ್ನಪಟ್ಟಣಕ್ಕೆ ಬರುತ್ತಿದ್ದಾರೆ. ಅವರಿಗೆ ರಾಮನಗರದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರೊಂದಿಗೆ ನಾನೂ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.