ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು,ಬೆಂಗಳೂರು ಪೊಲೀಸರು ಶುಕ್ರವಾರ ಉತ್ತರ ಪ್ರದೇಶದ ಜೌನ್‌ಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ರೆಕಾರ್ಡ್ ರೂಂಗೆ ತೆರಳಿ ದಾಖಲೆ ಸಂಗ್ರಹಿಸಿದ್ದಾರೆ.
ಬೆಂಗಳೂರಿನಿಂದ ಉತ್ತರ ಪ್ರದೇಶದ ಜೌನ್‌ಪುರಕ್ಕೆ ಇಂದು ಬೆಳಗ್ಗೆ ತೆರಳಿದ್ದ ಒಬ್ಬ ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ಕು ಸದಸ್ಯರ ಪೊಲೀಸ್ ತಂಡ ಸ್ಥಳೀಯ ಪೊಲೀಸರ ಸಹಾಯದಿಂದ ಅತುಲ್ ಸುಭಾಷ್ ಅವರ ಪತ್ನಿ ಮನೆಗೆ ಭೇಟಿ ನೀಡಿದ್ದಾರೆ. ಆದರೆ ಅತುಲ್ ಪತ್ನಿ ಹಾಗೂ ಅತ್ತೆ ಮನೆಯವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.
ಜೌನ್‌ಪುರದಲ್ಲಿರುವ ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೊಟೀಸ್ ಅಂಟಿಸಿದ್ದು, ಅದರಲ್ಲಿ ‘ನಿಮ್ಮನ್ನು ವಿಚಾರಣೆ ಮಾಡಲು ಸಮಂಜಸವಾದ ಆಧಾರಗಳಿವೆ. ಮೂರು ದಿನಗಳೊಳಗೆ ಬೆಂಗಳೂರಿನ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.