ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಡಿಸೆಂಬರ್ 9 ರಂದು ಬೆಂಗಳೂರಿನ ಮಂಜುನಾಥ ಲೇಔಟ್ ನ ಫ್ಲಾಟ್ ನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಕೇಸ್ ಪ್ರಕರಣ ಸಂಬಂಧ ಓರ್ವ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿ ಸುಶೀಲ್ ಗೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅತುಲ್ ಪತ್ನಿ ನಿಖಿತ ಸಿಂಘಾಣಿಯ, ತಾಯಿ ನಿಶಾ ಸಿಂಘಾಣಿಯ ನಿಖಿತಾ ಸಹೋದರ ಅನುರಾಗ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.