ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಮೃತರನ್ನು 26 ವರ್ಷದ ನಿಕ್ಷೇಪ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಟೆಕ್ಕಿಯಾಗಿದ್ದ ಇವರು ಕಳೆದ ಕೆಲವು ಸಮಯದಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಪೊಲೀಸ್ ಮೂಲಗಳ ಪ್ರಕಾರ, ನಿಕ್ಷೇಪ್ ಅವರು ‘ಸ್ಕಿಜೋಫ್ರೇನಿಯಾ’ ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ ಅಪಾರ್ಟ್‌ಮೆಂಟ್‌ನ 16ನೇ ಮಹಡಿಗೆ ತೆರಳಿದ ಅವರು ಅಲ್ಲಿಂದ ಕೆಳಕ್ಕೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಬಗಲಗುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

