ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿಖಿಲ್ ಸೋಮವಂಶಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಅಗರ ಕೆರೆಯಲ್ಲಿ ಶವ ಪತ್ತೆಯಾಗಿದ್ದು ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ನಿಖಿಲ್ ಐಐಎಸ್‌ಸಿ ಪದವೀಧರನಾಗಿದ್ದು ಕೋರಮಂಗಲದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈಗ ಅಸಹಜ ಸಾವು ಪ್ರಕರಣದ ಅಡಿ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.