ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಅವರ ಪತ್ನಿ ಮತ್ತು ಅವರ ಕುಟುಂಬ ಸದಸ್ಯರು ಶನಿವಾರ ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು ನಗರ ಪೊಲೀಸರು ಶುಕ್ರವಾರ ನಿಕಿತಾ ಸಿಂಘಾನಿಯಾ ಅವರ ಮನೆಗೆ ತೆರೆಳಿ ನೋಟಿಸ್ ನೀಡಿದ್ದು, ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ನಂತರ ಆರೋಪಿಗಳು ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ.