ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈ ಬಳಿಯ ಪೊಪರ್ಂದಲ್‍ನ ಗದ್ದೆಯಲ್ಲಿ ತಾಂತ್ರಿಕ ದೋಷದಿಂದಾಗಿ ಐಎಎಫ್‍ನ ತರಬೇತಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ಸಿಬ್ಬಂದಿ ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಸಲವಕ್ಕಂ ಪೊಲೀಸ್ ಠಾಣಾ ವ್ಯಾಪ್ತಿಯ ಪೊಪರ್ಂದಲ್ ಪ್ರದೇಶಕ್ಕೆ ಸಮೀಪಿಸಿದಾಗ ಹಠಾತ್ತನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮವಾಗಿ ಪೈಲಟ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಸ್ವಲ್ಪ ಸಮಯದ ನಂತರ ಮತ್ತೊಂದು ಸೇನಾ ಹೆಲಿಕಾಪ್ಟರ್ ಮೂಲಕ ಸಿಬ್ಬಂದಿ ಬಂದು ತಾಂತ್ರಿಕ ದೋಷ ಸರಿಪಡಿಸಿ ಸೇನಾ ನೆಲೆಗೆ ಕೊಂಡೊಯ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.