ಹೊಸದಿಗಂತ ವರದಿ ಕಲಬುರಗಿ:
ತರಬೇತಿ ವಿಮಾನ ಹಾರಾಟದ ವೇಳೆ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ವಿಮಾನವನ್ನು ರೈತರ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಜಿಲ್ಲೆಯ ಚಿತಾಪುರ ತಾಲೂಕಿನ ಪೆಟ್ ಶಿರೂರ್ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ವಿಮಾನ ಹಾರಿಸಿದ ನಂತರ 15 ಕಿ.ಮೀ.ವರೆಗೂ ಚಲಿಸಿದ ನಂತರ ಇಂಜಿನ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಜಮೀನೊಂದರಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.
ಸಮಸ್ಯೆ ಕಾಣಿಸಿಕೊಂಡ ತಕ್ಷಣವೇ ಪಕ್ಕದ ಜಮೀನಿನಲ್ಲಿ ಪೈಲಟ್ ವಿಮಾನವನ್ನು ಲ್ಯಾಂಡ್ ಮಾಡಿದ್ದು, ಅದೃಷ್ಟವಶಾತ್ ಪೈಲಟ್ ಹಾಗೂ ಟ್ರ್ಯೆನಿಗಳು ಬಚಾವ್ ಆಗಿದ್ದಾರೆ.
ಮಾಡಬೂಳ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.