ಟೇಕ್​ ಆಫ್​ ಆಗಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್

ಮಹಾರಾಷ್ಟ್ರದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ ಕಾರಣದಿಂದ ಇಂಡಿಗೋ ವಿಮಾನವು ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು,ಪೈಲಟ್‌ಗಳು ಮುನ್ನೆಚ್ಚರಿಕೆಯ ಕಾರ್ಯ ವಿಧಾನ ಅನುಸರಿಸಿದ ಕಾರಣ ವಿಮಾನವು ಸುರಕ್ಷಿತವಾಗಿ ಮರಳಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಹೇಳಿದೆ.
ನಾಗ್ಪುರದಿಂದ ಉತ್ತರ ಪ್ರದೇಶದ ಲಖನೌಗೆ ವಿಮಾನ ಟೇಕ್​ ಆಫ್​ ಆಗಿತ್ತು. ಆದರೆ, ತಾಂತ್ರಿಕ ಸಮಸ್ಯೆ ಕಾರಣ ಮರಳಿ ನಾಗ್ಪುರಕ್ಕೆ ಬಂದು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇತ್ತ, ಈ ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!