ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಎಇಯ(United arab Enirates) ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ತಿರುವನಂತಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಆಗಿದೆ.
ವಿಮಾನ ತಮಿಳುನಾಡಿನ ತಿರುಚಿರಪ್ಪಳ್ಳಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 10.45 ಕ್ಕೆ ಟೇಕಾಫ್ ಆಗಿತ್ತು. ಈ ವಿಮಾನದಲ್ಲಿ ಒಟ್ಟು 154 ಪ್ರಯಾಣಿಕರಿದ್ದರು. ಆದ್ರೆ ತಿರುಚಿರಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಸ್ವಲ್ಪ ಹೊತ್ತಿನಲ್ಲೇ ತಿರುವಂತಪುರದಲ್ಲಿ ಏರ್ಪೋರ್ಟ್ ಪ್ರಾಧಿಕಾರ ಎಮರ್ಜೆನ್ಸಿ ಲ್ಯಾಂಡಿಂಗ್ ಘೋಷಣೆ ಮಾಡಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಸ್ಪಷ್ಟನೆ ನೀಡಿದ್ದು, ಇದೊಂದು ಎಮರ್ಜೆನ್ಸಿ ಲ್ಯಾಂಡಿಂಗ್ ಆಗಿರಲಿಲ್ಲ, ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಆದ ತೊಂದರೆಗೆ ನಾವು ಕ್ಷಮೆಯಾಚಿಸುತ್ತೇವೆ. ಅವರ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಮಾಡಿದ್ದೇವೆ ಎಂದು ಏರ್ ಇಂಡಿಯಾ ಹೇಳಿದೆ.